ಚಿತ್ರನಟ ಅಶೋಕ್ ರಾವ್ ಕ್ಯಾನ್ಸರ್ನಿಂದ ಮೃತಪಟ್ಟಿದ್ದಾರೆ. ರಾತ್ರಿ 12.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ.
ನೂರಾರು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಹಿರಿಯ ನಟ ಅಶೋಕ್ ರಾವ್ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಈಗ ಮೃತಪಟ್ಟಿದ್ದು, ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ತೀವ್ರ ನೋವು ಉಂಟಾಗಿದೆ. ಡಾ. ರಾಜ್‌ಕುಮಾರ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರ ಜೊತೆ ಅಶೋಕ್ ರಾವ್ ತೆರೆಹಂಚಿಕೊಂಡಿದ್ದರು. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಅವರ ಅನುಭವ ಅಪಾರ. ಅವರಿಗೆ 75 ವರ್ಷ ವಯಸ್ಸಾಗಿತ್ತು. ರಾತ್ರಿ 12.30ಕ್ಕೆ ಅವರು ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. ಪತ್ನಿ, ಮಗಳು ಹಾಗೂ ಮಗನನ್ನು ಅಶೋಕ್ ರಾವ್ ಅಗಲಿದ್ದಾರೆ. ಕೆಲವು ವರ್ಷಗಳಿಂದ ಅವರು ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿಯವರೆಗೂ ಚೆನ್ನಾಗಿದ್ದರು. ಆದರೆ ಈಗ ಅವರು ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾರದಿಂದ ಅಶೋಕ್ ರಾವ್ ಮೃತರಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.
ಆವೇಶ’, ‘ಮತ್ತೆ ಹಾಡಿತು ಕೋಗಿಲೆ’, ‘ಕಾಲಚಕ್ರ’, ‘ಬಾ ನಲ್ಲೆ ಮಧುಚಂದ್ರಕೆ’, ‘ಹಬ್ಬ’ ಮುಂತಾದ ಚಿತ್ರಗಳಲ್ಲಿ ಅಶೋಕ್ ಬಣ್ಣ ಹಚ್ಚಿಸಿದ್ದಾರೆ. ಡಾ ರಾಜ್‌ಕುಮಾರ್, ಟೈಗರ್ ಪ್ರಭಾಕರ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ ನಾಗ್ ಸೇರಿ ಅನೇಕ ನಟರ ಜೊತೆ ಅಶೋಕ್ ರಾವ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಟೈಗರ್ ಪ್ರಭಾಕರ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಅಶೋಕ್ ರಾವ್ 15ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಮಾಲ್ಗುಡಿ ಡೇಸ್’ ಸಿರೀಸ್‌ನಲ್ಲಿಯೂ ಅಶೋಕ್ ರಾವ್ ಅವರು ಅನಂತ್ ನಾಗ್ ಅಣ್ಣ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಾಜಿ ಗಣೇಶನ್ ಪ್ರೊಡಕ್ಷನ್ಸ್‌ನಲ್ಲಿಯೂ ಅಶೋಕ್ ರಾವ್ ಕೆಲಸ ಮಾಡಿದ್ದಾರೆ. ಆದರೆ ಕಾಲ್‌ಶೀಟ್‌ನಿಂದ ‘ಆಕಸ್ಮಿಕ’ ಚಿತ್ರದಲ್ಲಿ ಅಶೋಕ್ ರಾವ್ ನಟಿಸೋದು ಮಿಸ್ ಆಯ್ತು. ರಜನಿಕಾಂತ್ ಅವರ ಜೊತೆ ‘ಚಂದ್ರಮುಖಿ’ ಚಿತ್ರದಲ್ಲಿಯೂ ಅಶೋಕ್ ರಾವ್ ಬಣ್ಣ ಹಚ್ಚಿದ್ದರು.
ಮಧುಮೇಹಿಗಳು ಮತ್ತು ಆಹಾರ ಕಾಳಜಿ ಇರುವವರಿಗಾಗಿ ಸಕ್ಕರೆ ರಹಿತ ನಂದಿನಿ ಸಿಹಿ ಉತ್ಪನ್ನಗಳ ಬಿಡುಗಡೆ