ನಮ್ಮ ರಾಮನಗರ

ರಾಮನಗರದಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವ

ರಾಮನಗರ:  ಇದೇ 29ರಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಆಯೋಜಿಸಿದ್ದು, ಅದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು. ಕರ್ನಾಟಕ ಜಾನಪದ ಪರಿಷತ್ತು, ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತದಿಂದ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಉತ್ಸವದಲ್ಲಿ ಭಾಗವಹಿಸಲಿದ್ದು, ರೂಪ ರೇಷೆಗಳಿಗೆ ತಕ್ಕಂತೆ ಉತ್ಸವ ನಡೆಯುವ ಸ್ಥಳದಲ್ಲಿ ಸ್ಪರ್ಧಿಗಳಿಗೆ ಹಾಗೂ ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಕಲ್ಪಿಸಬೇಕು. ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜು ಮಕ್ಕಳು ಭಾಗವಹಿಸುವಂತೆ ಉತ್ತಮ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಉಪಹಾರ, ಕುಡಿಯುವ ನೀರಿನ ಪೂರೈಕೆ ಮಾಡಬೇಕು. ವಿದ್ಯುತ್ ತಂತಿಗಳ ಉತ್ಸವಕ್ಕೆ ಯಾವುದೇ ಅಡಚಣೆಯಾಗದಂತೆ ಬೇಸ್ಕಾಂ ನಿಗಾ ವಹಿಸಬೇಕು ಎಂದರು.

ಉತ್ಸವವು ಎರಡು ಹಂತದಲ್ಲಿ ನಡೆಯಲಿದೆ. ವೇದಿಕೆ ಹಾಗೂ ಸಮಾರೋಪ ವೇದಿಕೆ, ಕ್ರೀಡಾಂಗಣ ಕಾಯ್ಧಿರಿಸುವಿಕೆ ಸ್ವಚ್ಚತೆ ಕುರಿತು ನಗರ ಸಭೆ ಮತ್ತು ಯುವಜನ ಸೇವಾ ಇಲಾಖೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಪೋಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಉತ್ಸವಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ವೃತ್ತಿಪರ ಗಾಳಿಪಟ ಹಾರಿಸುವವರನ್ನು ಆಹ್ವಾನಿಸಲಾಗುವುದು ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ಸದಲ್ಲಿ ಕೋವಿಡ್ ನಿಯಮ ಪಾಲಿಸಬೇಕು. ಆಂಬ್ಯುಲೆನ್ಸ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆಪ್ತ ಕಾರ್ಯದರ್ಶಿ ಮಾರುತಿ ಪ್ರಸನ್ನ ಮಾತನಾಡಿ, ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಬಹುದಾದ ಉತ್ಸವವನ್ನಾಗಿ ರೂಪಿಸುವ ಉದ್ಧೇಶವಿದೆ ಎಂದರು.
ಜಾನಪದ ಲೋಕದ ಕ್ಯುರೇಟರ್ ಯು.ಎಂ. ರವಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಕಾಂತರಾಜ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ರೂಪಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ವಿಶೇಷ ಕರ್ತವ್ಯಾಧಿಕಾರಿ ಅಂಜಿನಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಜಿ. ರಮೇಶ್ ಬಾಬು ಹಾಜರಿದ್ದರು.

Credit: PV Rmgm

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!