ಅಬ್ರಹಾಂ ಲಿಂಕನ್ ತನ್ನ ಮಗನನ್ನು ಶಾಲೆಗೆ ಸೇರಿಸುವಾಗ ಶಿಕ್ಷಕರಿಗೆ ಮಾಡಿಕೊಂಡ ಕಳಕಳಿಯ ವಿನಂತಿ ಹೀಗಿತ್ತು….
ಆತ್ಮೀಯ ಶಿಕ್ಷಕ ಬಂಧುಗಳೇ,..
ಇದು ನನ್ನೊಂದಿಗೆ ಹುಟ್ಟಿಕೊಂಡ ಕನಸುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ ,ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ. “ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯ….” ಎಂದು ದಯವಿಟ್ಟು ಹೇಳಿಕೊಡಬೇಡಿ.
ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ ಮಾಡುವುದೇ ಶ್ರೇಷ್ಠ ಎಂಬುದನ್ನು ಹೇಳಿಕೊಡಿ.ಅವನಿಗೆ ಉತ್ತಮ ಪುಸ್ತಕಗಳ ಹುಚ್ಚು ಹಿಡಿಯುವಂತೆ ಮಾಡಿ, ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ.ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ.
ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಯಿಂದ ಇರುವುದನ್ನು ಹೇಳಿಕೊಡಿ, ನೋವಿನಲ್ಲೂ ನಗುವುದನ್ನು ಕಲಿಸಿ.ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ. ಸಾಧ್ಯವಾದರೆ ಅವನಿಗೆ ಪ್ರಕೃತಿಯಲ್ಲಿ ಕಳೆದುಹೋಗುವುದನ್ನು ಹೇಳಿಕೊಡಿ, ಸುರಿಯುವ ಮಳೆಯಲ್ಲಿ ನೆನೆಯುವ, ಚಿಟ್ಟೆಗಳ ಚಂದವನ್ನು ಆನಂದಿಸುವ, ಹಾರುವ ಪಕ್ಷಿಗಳನ್ನು ಎಣಿಸುವ, ಸಾಲಾಗಿ ನಡೆದುಕೊಂಡು ಹೋಗುವ ಇರುವೆಗಳನ್ನು ಹಿಂಬಾಲಿಸುವ, ಬೀಜ ಮೊಳೆಯುವುದನ್ನು ಕಾಯುವ ಕುತೂಹಲ ತುಂಬಿ.ಗಿಡ ನೆಡಲು ಪಣತೊಡುವ ಮನಸ್ಸು ಬರುವಂತೆ ಮಾಡಿ.
ಬದುಕಿನಲ್ಲಿ ಮೋಸ ಮಾಡಿ ಗೆಲ್ಲುವುದಕ್ಕಿಂತ, ಪ್ರಾಮಾಣಿಕವಾಗಿ ಸೋಲುವುದನ್ನು ಕಲಿಸಿ.ಅನ್ಯಾಯ ಮಾಡಿ ಗಳಿಸುವುದಕ್ಕಿಂತ, ಒಬ್ಬರಿಗೆ ನೋವು ಮಾಡಿ ಪಡೆಯುವುದಕ್ಕಿಂತ ಪ್ರಾಮಾಣಿಕತೆಯಿಂದ ಸಾಧಿಸಲು ತಿಳಿಸಿ.ಜೀವನ ತುಂಬಾ ಸುಂದರವಾಗಿದೆ ಎಂಬುದನ್ನು ಹೇಳಿಕೊಡಿ.
ಪ್ರತಿ ಕ್ಷಣದಲ್ಲೂ ಖುಷಿಯಿದೆ ಎಂಬುದನ್ನು ಅವನು ತಿಳಿಯಲಿ.ಹೆಣ್ಣನ್ನು ಗೌರವಿಸುವ, ದೀನ ದುರ್ಬಲರನ್ನು, ವಯೋ ವೃದ್ಧರನ್ನು ನೋಡಿ ಮರುಗುವ ಗುಣ ಕಲಿಸಿ, ಕಷ್ಟದಲ್ಲಿ, ನೋವಿನಲ್ಲಿರುವವರ ಸಹಾಯಕ್ಕೆ ಧಾವಿಸುವ ಛಲ ಬರುವಂತೆ ಮಾಡಿ.
ಫೇಲಾದರೂ ಪರವಾಗಿಲ್ಲ ಬದುಕಿನಲ್ಲಿ ಖುಷಿಯಾಗಿ ದುಡಿದು ಜೀವಿಸುವುದನ್ನು ಕಲಿಸಿ.
ನಾನು ಅವನನ್ನು ಒಬ್ಬ ಡಾಕ್ಟರ್, ಎಂಜಿನಿಯರ್, ಉನ್ನತ ಅಧಿಕಾರಿಗಿಂತ ಒಳ್ಳೆಯ ಮನುಷ್ಯನಾಗಿ ಬಾಳುವುದನ್ನು ಕಾಣ ಬಯಸುತ್ತೇನೆ.
ಅವನಿಗೆ ಇಂಥ ಗುಣಗಳನ್ನು ರೂಢಿಸಿದರೆ ನಾನು ನಿಮಗೆ ಋಣಿ…
… ✍ಅಬ್ರಹಾಂ ಲಿಂಕನ್
Credit: Whatsapp