ರಾಮನಗರ ಜಿಲ್ಲಾ ಕೇಂದ್ರದಲ್ಲಿ ಹೊಸದಾಗಿ ಪ್ರಾರಂಭಿಸಿರುವ ಕೋವಿಡ್-19 ಪರೀಕ್ಷಾ ಪ್ರಯೋಗಾಲಯವನ್ನು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಎನ್. ಅಶ್ವತ್ಥ ನಾರಾಯಣ ಅವರು ಶುಕ್ರವಾರ ಉದ್ಘಾಟಿಸಿದರು.
ಇದರಿಂದಾಗಿ ಕೊರೋನಾ ಸೋಂಕಿತರ ಮಾದರಿಗಳನ್ನು ರಾಮನಗರದಲ್ಲಿಯೇ ತ್ವರಿತವಾಗಿ ಪರೀಕ್ಷಿಸಬಹುದಾಗಿದೆ. ಇದುವರೆಗೂ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಿ ವರದಿಗಳನ್ನು ಅಲ್ಲಿಂದ ತರಿಸಿಕೊಳ್ಳಲಾಗುತ್ತಿತ್ತು. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಶಂಕಿತ ಮಾದರಿಗಳನ್ನು ನೂತನ ಲ್ಯಾಬ್ ನಲ್ಲಿ ಪರೀಕ್ಷಿಸಿ ವರದಿಗಳನ್ನು ಇಲ್ಲಿಂದಲೇ ಪಡೆದುಕೊಳ್ಳಬಹುದಾಗಿದೆ.