“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”,ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ :“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.ಇನ್ನು “ಏಕಾದಶಿ” ಎಂದರೆಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು. “ಏಕಾದಶಿ” ಒಂದು ವ್ರತ.ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು.ಎಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ.
ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ.ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.ನಂದಗೋಪನಿಗೆ ಪರಮಾನಂದವಾಯಿತು.
ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜ ರೂಪ ಅರಿಯಲಾರೆವು ಎಂದು ಪರಿತಪಿಸಿದರು.ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು,ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.
ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು.ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು.ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..
ವೈಕುಂಠ ಏಕಾದಶಿ…!!!ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ.ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು ಬಂದಿದೆ.
ಈ ಒಂದು ಏಕಾದಶಿ ಮೂರು ಕೋಟಿ ಏಕಾದಶಿಗಳಿಗೆ ಸಮವಾದ ಪವಿತ್ರತೆಯನ್ನು ಹೊಂದಿರುವ ಕಾರಣ ಇದನ್ನು ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.ಮುಕ್ಕೋಟಿ ಏಕಾದಶಿ ದಿನ ಹಾಲಾಹಲ, ಅಮೃತ ಎರಡೂ ಹುಟ್ಟಿದವು. ಈ ದಿನವೇ ಶಿವನು ಹಾಲಾಹಲ ನುಂಗಿದ. ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಕೃಷ್ಣನು ಅರ್ಜುನನಿಗೆ ಇದೇ ದಿನ
ಉಪದೇಶಿಸಿದ ಎಂಬ ನಂಬಿಕೆ ಇದೆ.ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ .ವಿಷ್ಣು ಪುರಾಣದ ಪ್ರಕಾರ ಇಬ್ಬರು ರಾಕ್ಷಸರು ತನಗೆ ವಿರೋದ ವಾಗಿದ್ದರೂ ವೈಕುಂಠ ಏಕಾದಶಿ ದಿನ ತನ್ನ ಬಾಗಿಲನ್ನು ತೆರೆದಿರುತ್ತಾನಂತೆ ಈ ಕತೆಯನ್ನು ಕೇಳಿದವರಿಗೆ ಮೋಕ್ಷ ಪ್ರಾಪ್ತಿಯಾಗುವಂತೆ ವೈಕುಂತದ ಬಾಗಿಲನ್ನು ತೆರೆದಿಡುವಂತೆ ಬೇಡಿಕೊಳ್ಳುತ್ತಾರೆ.ಆದುದರಿಂದ ಎಲ್ಲಾ ವಿಷ್ಣು ದೇವಾಲಯದ ಬಾಗಿಲುಗಳನ್ನು ಆ ದಿನ ತೆಗೆದಿರುತ್ತಾರೆ . ಮಾಮೂಲಿ ದಿನಗಳಲ್ಲಿ ಉತ್ತರ ದ್ವಾರಗಳನ್ನು ಮುಚ್ಚಿರುತ್ತಾರೆ .ಆದರೆ, ವೈಕುಂಠ ಏಕಾದಶಿ ದಿನ ಬಾಗಿಲನ್ನು ತೆರೆದಿರುತ್ತಾರೆ .
ವೈಕುಂಠ ಏಕಾದಶಿ ದಿನ ತಿರುಮಲೆಯ ದೇವಾಲಯದಲ್ಲಿರುವ ಉತ್ತರ ದ್ವಾರವನ್ನು ತೆರೆದಿರುತ್ತಾರೆ. ಪದ್ಮ ಪುರಾಣದ ಪ್ರಕಾರ ವಿಷ್ಣುವಿನಿಂದ ಬಂದ ಶಕ್ತಿಯಿಂದ ಮೊರಾ ಎಂಬ ರಾಕ್ಷಸನನ್ನು ಸಂಹರಿಸಿದ ದಿನವಂತೆ .ಮುಕ್ಕೋಟಿ ಏಕಾದಶಿ ದಿನದಂದು ಅಂದರೆ ಧನುರ್ಮಾಸ ಶುಕ್ಲ ಏಕಾದಶಿ ದಿನದಂದು ಉಪಾಸವಿರ ಬೇಕಂತೆ ಇದಕ್ಕೆ ಕಾರಣವೇನೆಂದರೆ..ಮೊರಾ ಎಂಬ ರಾಕ್ಷಸನು ಅಂದು ಅಕ್ಕಿಯಲ್ಲಿ ಅಡಗಿ ಕುಳಿತಿರುತ್ತಾನಂತೆ .ಆದುದರಿಂದ ಅಂದು ಅಕ್ಕಿಯಿಂದ ಮಾಡಿದ ಯಾವುದೇ ಪದಾರ್ಥವನ್ನು ತಿನ್ನ ಬಾರದು .
ಮುಕ್ಕೋಟಿ ಏಕಾದಶಿ ಒಂದು ದಿನ ಉಪವಾಸ ವಿದ್ದರೆ ಮಿಕ್ಕ 23 ಏಕಾದಶಿಗಳಲ್ಲಿ ಉಪವಾಸ ವಿದ್ದಂತೆಯೇ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ. ಮೊರಾ ಎಂದರೆ ರಾಜಸಿಕ ಹಾಗೂ ತಾಮಾಸಿಕ ಗುಣಗಳಿಗೆ ಪ್ರತೀಕ. ಅವುಗಳನ್ನು ಉಪವಾಸ ವಿರುವುದರ ಮೂಲಕ ಜಯಿಸುವುದರ ಮೂಲಕ ಮುಕ್ತಿಗೆ ಮಾರ್ಗ ದೊರೆಯುತ್ತದಂತೆ….
caredit: whatsapp