ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ರಾಜ್ಯದ ಮೊದಲ ಮುಖ್ಯಮಂತ್ರಿ ಕ್ಯಾಸಂಬಳ್ಳಿ ಚೆಂಗಲರಾಯರೆಡ್ಡಿ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿನ ಕೆ ಸಿ ರೆಡ್ಡಿಯವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಕೆ ಸಿ ರೆಡ್ಡಿ ಅವರ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.