ವಿಶ್ವವೇ ಕೊರೊನಾಮಯವಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಮಯದಲ್ಲಿ ನಿರ್ಗತಿಕರಿಗೆ, ಬಡವರಿಗೆ ಆಸರೆಯಾಗಿ ಉಳ್ಳವರು ಸಹಾಯ ಹಸ್ತ ಚಾಚುವ ಮೂಲಕ ಮಾನವಿಯತೆಯನ್ನು ತೊರಿಸುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೂ ಕೂಡ ಪಕ್ಷ ಭೇದ ಮರೆತು ಎಲ್ಲ ಪಕ್ಷದವರು ತಮ್ಮ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ.
‘ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿ Cipla ಸಂಸ್ಥೆಯ ವತಿಯಿಂದ 50 ಲಕ್ಷ ರೂ
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಹೆಚ್.ಡಿ.ಕೆ ಕುಟುಂಬದವರು ಅನ್ನ ಪರಬ್ರಹ್ಮ ದಿನಸಿ ಕಿಟ್‍ಗಲನ್ನು ಕೋವಿಡ್ ಲಾಕ್ ಡೌನ್‍ನಿಂದ ತತ್ತರಿಸಿರುವ ಬಡವರಿಗೆ, ನಿರ್ಗತಿಕರಿಗೆ ನೀಡಲು ಸಾಂಕೇತಿಕವಾಗಿ ಚಾಲನೆ ನೀಡಿದರು. ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರಿಗೆ ದಿನಸಿ ಕಿಟ್ ಹಂಚುವ ಕಾರ್ಯ ಇದಾಗಿದೆ.
ಹೆಚ್.ಡಿ. ಕುಮಾರಸ್ವಾಮಿ ಅನಿತಾ ಕುಮಾರಸ್ವಾಮಿ ದಂಪತಿಗಳ ಸುಪುತ್ರ ನಿಖಿಲ್ ಕುಮಾರ್ ಸ್ವಾಮಿ ಮತ್ತು ಸೊಸೆ ರೇವತಿ ನಿಖಿಲ್ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ದಿನಸಿ ಪಡೆದ ಎಲ್ಲರೂ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ತಾಲ್ಲೂಕಿನ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ರಾಮನಗರದಲ್ಲಿ ದಿನಸಿ ಕಿಟ್ (ಅನ್ನಂ ಪರಬ್ರಹ್ಮ )ನೀಡುವ ಕಾರ್ಯಕ್ಕೆ ಹೆಚ್ಡಿಕೆ ಕುಟುಂಬದಿಂದ ಚಾಲನೆ.