ಸುದ್ದಿ

ಆರೋಪಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌

ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ  ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ಹೇಳಿದ್ದಾರೆ.

ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್‌ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ(Social Media) ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಇವುಗಳು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.


ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಕ್ರಮ ಕೈಗೊಂಡಿರುತ್ತೇನೆ.

ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ 3 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ. ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ಹೂಡಲಿದ್ದೇನೆ.ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಎನ್. ಅಂಬಿಕಾ ಐ.ಪಿ.ಎಸ್ ಆದ ರೋಚಕ ರಿಯಲ್ ಸ್ಟೋರಿ ವಿಡಿಯೋ

ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನಎಂದು ಮಾಧ್ಯಮಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!