ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ನಂದಿನಿ ದೇಸಿ ಹಾಲು, ನಂದಿನಿ ಚೀಸ್ ಸೇರಿದಂತೆ ವಿವಿಧ ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೆಎಂಎಫ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲಾಯಿತು. ಉತ್ಪನ್ನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೈನೋದ್ಯಮದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ನಂದಿನಿ ಉತ್ಪನ್ನಗಳು ಕರ್ನಾಟಕ ಮಾತ್ರವಲ್ಲದೇ ವಿವಿಧ ರಾಜ್ಯಗಳಲ್ಲೂ ಹೆಸರುವಾಸಿಯಾಗುತ್ತಿವೆ. ಕೆಎಂಎಫ್ ಪ್ರತಿನಿತ್ಯ ರಾಜ್ಯದ ರೈತರಿಂದ 76ಲಕ್ಷ ಲೀ ಹಾಲನ್ನು ಶೇಖರಣೆ ಮಾಡುತ್ತಿದ್ದು, ದಿನವಹಿ 24 ಕೋಟಿ ರೂ ವಹಿವಾಟು ಹೊಂದಿದೆ. ರಾಜ್ಯದ ಶೇ. 80 ರಷ್ಟು ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವರದಾನವಾಗಿದೆ. ಈ ಇದ ದೇಶಿ ಹಾಲು ಹಾಗೂ ಇತರ ಉತ್ಪನ್ನಗಳನ್ನು ಬಿಡುಗಡೆ ಮಾಡಿರುವುದು ಸಂತೋಷ ತಂದಿದೆ. ಕೆಎಂಎಪ್ ಗೆ ಸರ್ಕಾರದ ಬೆಂಬಲವಿರುತ್ತದೆ ಎಂದು ತಿಳಿಸಿದರು.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಲ ಜಾರಕಿಹೊಳಿ ಮಾತನಾಡಿ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು 6 ರೂ. ಗೆ ಹೆಚ್ಚಿಸಲು ಮನವಿ ಮಾಡಿದರು. ರೈತರ ಕೈಗಾರಿಕೆಯಾಗಿರುವ ಕೆಎಂಎಫ್ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡ್ಯೊಯಲು ರಾಜ್ಯ ಸರ್ಕಾರದ ಸಹಕಾರ ನೀಡಬೇಕಿದೆ. 2008ರಲ್ಲಿ ಮೊದಲ ಬಾರಿಗೆ ಪ್ರತಿ ಲೀ. ಹಾಲಿಗೆ ಎರಡು ರೂ ಪ್ರೋತ್ಸಾಹಧನವನ್ನು ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರಕಟಿಸಿದ್ದು, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಪ್ರಭುಚೌವóಹ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸಿ. ಸತೀಶ್ ಸರ್ಕಾರದ ಕಾರ್ಯದರ್ಶಿ ರಶ್ಮಿ ಮಹೇಶ್ ಕೆಎಂಎಫ್ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ವಿವಿಧ ಹಾಲು ಒಕ್ಕೂಟಗಳ ಅಧ್ಯಕ್ಷರು, ಮಂಡಳಿ ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.