ಕನ್ನಡದ ಹಿರಿಯ ಕವಿ, ಸಾಹಿತಿ ಪ್ರೋ. ಕೆ.ಎಸ್. ನಿಸಾರ್ ಅಹಮದ್ ಅವರು ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಿಸಾರ್ ಅಹಮದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇಂದು (ಮೇ-3) ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ದಿನಗಳ ಹಿಂದಷ್ಟೇ ಅಮೇರಿಕದಲ್ಲಿದ್ದ ಅವರ ಪುತ್ರ ಕೂಡ ನಿಧನರಾಗಿದ್ದು, ತೀವ್ರ ಆಘಾತಕ್ಕೊಳಗಾಗಿದ್ದರು.
ಕೆ.ಎಸ್. ನಿಸಾರ್ ಅಹಮದ್ ಪೂರ್ಣ ಹೆಸರು ಕೊಕ್ಕರೆ ಹೊಸಹಳ್ಳಿ ಶೇಖಹೈದರ ನಿಸಾರ್ ಅಹಮದ್ ಅಂತ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರವರಿ 5 1983ರಂದು ಜನಿಸಿದ್ದ ನಿಸಾರ್ ಅಹಮದ್ ಭೂವಿಜ್ಞಾನ ವಿಷದಯದಲ್ಲಿ ಸ್ನಾತ್ತಕೊತ್ತರ ಪದವಿಯನ್ನು ಪಡೆದಿದ್ದರು. ವಿವಿಧ ಕಾಲೇಜುಗಳಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿದ್ದರು.
ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ನಿಸಾರ್ ಅಹಮದ್ ರವರಿಗೆ ಪದ್ಮಶ್ರಿ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿಗಳು ಹುಡುಕಿಕೊಂಡು ಬಂದಿದ್ದವು. ಇವರ ನಿತ್ಯೋತ್ಸವ ಕ್ಯಾಸೆಟ್ ಸಾಕಷ್ಟು ಜನಪ್ರಿಯವಾಗಿತ್ತು. ಕುರಿಗಳು ಸಾರ್ ನಾವು ಕುರಿಗಳು ಈ ಕವಿತೆಯ ಮೂಲಕ ಎಲ್ಲರ ಮನದಲ್ಲೂ ಶಾಶ್ವತವಾಗಿ ನೆಲಸಿದ್ದ ನಿಸಾರ್ ಅಹಮದ್ ಇಂದು ವಿಧಿವಶರಾಗಿ ಸಾರಸ್ವತಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಈ ನುಡಿ ನಮನದ ಮೂಲಕ ಕೆ.ಎಸ್. ನಿಸಾರ್ ಅಹಮದ್ ರವರಿಗೆ ಭಾವಪೂರ್ಣ ಶ್ರದ್ದಾಂಜಲಿ.