ಎಂ.ಆರ್.ಕೆ ಕಾಲಂ

ಆಷಾಢದ ಕಪ್ಪುಮೋಡಗಳ ಸೀಳಿ! -2

ಮುಂದುವರೆದ ಭಾಗ : ಎಲೆಯ ಮೇಲುರುಳುತ್ತ , ಮುತ್ತಿನ ಕಂಠಿಯ ಕಮಲಕ್ಕೆ ಕಿರುದೆರೆಗಳು ಹಾರವನ್ನು ಹಾಕಿವೆ. ತಣ್ಣಗೆ ನುಣ್ಣಗೆ ಗಾಳಿ ನುಸುಳಿ ಬಳ್ಳಿಗೆ ಕಚಗುಳಿಯನ್ನು ನೀಡುತ್ತಿದೆ. ಪೊದರಿನಲ್ಲಿ, ಮೆಳೆಯಲ್ಲಿ, ವನದಲ್ಲಿ ಹಕ್ಕಿಯು ಹಾಡನ್ನು ಹರಡುತ್ತಿದೆ. ಅಂತ ಶರದದ ಹಗಲಲ್ಲಿ ಒಲವಿದೆ, ಗೆಲುವಿದೆ, ನಲವಿದೆ. ಆದರೆ ಕವಿಯ ಮನಸ್ಸು ಮಾತ್ರ ಒಲವಿನ ಪೂರ್ಣತೆಯನ್ನು ಅರಸುವ ದುಂಬಿಯಂತಿದೆ. ಚಿಂತೆಯ ಕಪ್ಪುಮೋಡದಲ್ಲಿ ಬೆಳಕನ್ನು ಕಾಣಲು ತವಕಿಸುತ್ತಿದೆ. ಬಾಳಿನ ಕನಸುಗಳಿಗೂ ಮತ್ತು ನನಸುಗಳಿಗೂ ಇರುವ ಅಪಾರ ಅಂತರವನ್ನು ನೆನೆದು ಉಲ್ಲಾಸ ಕುಗ್ಗಿ ಹೋಗುತ್ತಿದೆ. ಶರದೃತುವಿನ ಗೆಲುವಿನ ಹಗಲಲ್ಲಿ ನಲವಿನ ಸಂದೇಶವಿದ್ದರೆ ವಿಚಿತ್ರ ಎನ್ನುವಂತೆ ಬಾಳಿನ ನಲವನ್ನು ನೀಡುತ್ತಿರುವ ಸಂದೇಶವೇ ಮನಸ್ಸನ್ನು ಕುಗ್ಗಿಸುತ್ತಿದೆ.

ಈ ಪಿಯಾನೋ ನುಡಿಸಲು ಮೂರು ಮಹಡಿ ಹತ್ತಬೇಕು!

ಪೂರ್ಣತೆಯನ್ನು ಅರಸುತ್ತ ನವೆಯುವವರ ಕತೆಯೆಲ್ಲ ಹೀಗೆಯೋ ಏನೋ. ಯಾವುದನ್ನು ಕಂಡರೂ ಅಲ್ಲೊಂದು ಕೊರತೆಯಿದ್ದಂತೆ ಭಾಸವಾಗುತ್ತಿರುತ್ತದೆ. ಸಂಪೂರ್ಣವಾಗಿ ಯಾವುದರಲ್ಲೂ ತೊಡಗಿಕೊಳ್ಳಲಾಗದ, ಮತ್ತೇನನ್ನೋ ಬಯಸುವ ಮನಸ್ಸದು. ಅದಕ್ಕೆ ಹೊರಗಿನ ಚಳಿ, ಗಾಳಿ, ಮಳೆ ಯಾವುದೂ ಪರಿಣಾಮ ಬೀರಲಾರದು. ಋತುಮಾನಗಳನ್ನು ಧಿಕ್ಕರಿಸಿ ಏನನ್ನೋ ಅರಸಿ ಹಿಮಾಲಯದ ಗುಹೆಯೊಳಗೆ ತಪಸ್ಸಿಗೆ ಕೂರುವವರ ಮನಃಸ್ಥಿತಿಯದು. ನಮಗೆಲ್ಲ ಅನೇಕ ಬಾರಿ ಹೀಗಾಗುತ್ತದೆ. ಎಲ್ಲರೂ ಹೊಗಳುವ, ನಾಟಕಕ್ಕೋ, ಚಲನಚಿತ್ರಕ್ಕೋ, ನೃತ್ಯಕ್ಕೋ ಹೋಗುತ್ತೇವೆ. ಸುತ್ತಲಿನವರು ಖುಷಿಯಿಂದ ಕುಣಿಯುತ್ತಿರುತ್ತಾರೆ. ನಮಗೆ ಆ ದೃಶ್ಯ ಖುಷಿ ಕೊಟ್ಟಿರುವುದೇ ಇಲ್ಲ. ಸುತ್ತಲಿನವರು ನಗುತ್ತಿರುತ್ತಾರೆ. ನಾವು ಬೆಪ್ಪರಂತೆ ಸುಮ್ಮನೆ ಕುಳಿತಿರುತ್ತೇವೆ. ಯಾವುದೋ ವಿಷಯವನ್ನು ಗಹನವೆಂದು ಮಾತಾಡುತ್ತಿರುತ್ತಾರೆ. ನಮಗಲ್ಲಿ ಯಾವ ಗಹನತೆಯೂ ಕಾಣುವುದಿಲ್ಲ. ಹೊರಗಿನ ಲೋಕಕ್ಕೂ ನಮಗೂ ಏನೇನೂ ಸಂಬಂಧವಿಲ್ಲದವರಂತೆ ಇದ್ದುಬಿಡುತ್ತೇವೆ.

ದೇವರ ನಾಡಲ್ಲಿ ರಾಮಾಯಣದ ‘ಜಟಾಯು’ ಪಾರ್ಕ್

ಅನೇಕ ಬಾರಿ ವಿದ್ಯಾರ್ಥಿಗಳ ಜೊತೆ ಪ್ರವಾಸ ಹೋದಾಗ ನನಗೆ ಈ ಅನುಭವವಾಗಿದೆ. ಅವರ ಉನ್ಮತ್ತ, ಖುಷಿಯ, ಕುಣಿವ ವಾತಾವರಣಕ್ಕೂ ನನಗೂ ಸಂಬಂಧವಿಲ್ಲವೇನೋ ಎನ್ನುವಂತೆ, ಆ ಜಗತ್ತಿನಿಂದ ನನ್ನನ್ನು ಬೇರೆ ಎಲ್ಲೋ ಇಟ್ಟಂತೆ ಭಾಸವಾಗಿರುತ್ತದೆ. ಆದರದನ್ನು ತೋರ್ಪಡಿಸಿಕೊಳ್ಳಲಾಗಿಲ್ಲ. ಹಾಗೆ ಮಾಡಿದರೆ ಬೇರೊಬ್ಬರ ಸಂತೋಷವನ್ನು ಹಾಳು ಮಾಡಿದಂತಾಗಿಬಿಡುತ್ತದಲ್ಲ. ವಸಂತ ಋತುವಿನಲ್ಲಿ ಶಿಶಿರ ಗಾನ ಹಾಡಿದಂತಾಗುವುದಲ್ಲ! ಈ ರೀತಿ ನರಳುವುದರಲ್ಲೂ ಮನುಷ್ಯನಿಗೆ ಎಂಥದ್ದೋ ಖುಷಿಯಿರಬೇಕು! ಇಲ್ಲದಿದ್ದರೆ ಹಾಗೇಕೆ ವರ್ತಿಸುತ್ತಾನೆ ಎಂದುಕೊಂಡದ್ದಿದೆ.

ಈ ಕಾರಣಕ್ಕಾಗಿಯೇ ಯಾವುದೇ ಬೀಸು ಹೇಳಿಕೆಗಳನ್ನು ಯಾವ ವಿಷಯದ ಬಗ್ಗೆಯೂ ಒಪ್ಪಲಾಗುವುದೇ ಇಲ್ಲ. ಪ್ರತಿಯೊಂದು ವಿಷಯಕ್ಕೆ ಅನೇಕ ಮುಖಗಳಿವೆ, ಸತ್ಯಗಳಿವೆ. ಒಬ್ಬರಿಗೆ ಅನುಭವಕ್ಕೆ ಬಂದದ್ದು ಮತ್ತೊಬ್ಬರಿಗೆ ಬರುವುದೇ ಇಲ್ಲ. ಬಂದರೂ ಉಳಿದವರಿಗೆ ಅರ್ಥವಾಗುವುದೇ ಇಲ್ಲ. ಈ ಆಷಾಢದಲ್ಲಿ ಮೋಡಗಳ ದುಗುಡ ಹೆಚ್ಚಿದಂತೆ ಎಲ್ಲರೂ ದುಗುಡಗೊಳ್ಳುತ್ತಾರೆ ಎನ್ನುವುದು ಮೂರ್ಖತನ.. ಈ ಕಪ್ಪು ಮೋಡಗಳನ್ನು ಸೀಳಿದ ಬೆಳಕಿನ ಗೆರೆಗಳು ಎಲ್ಲೆಲ್ಲೋ ಕುಣಿಯುತ್ತಿರಬಹುದು!

ಆಷಾಢದ ಕಪ್ಪುಮೋಡಗಳ ಸೀಳಿ! 1

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!