ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ನಾಗರಿಕರ ಸಹಕಾರ ಬಹಳ ಮುಖ್ಯ ಎಂದು ವಿ ಹೆಚ್ ಒ ಡಾ. ಟಿ ಅಮರ್ ನಾಥ್ ರವರು ತಿಳಿಸಿದರು.
ಜಿಲ್ಲಾ ಕುಟುಂಬ ಮತ್ತು ಆರೋಗ್ಯ ಇಲಾಖೆಯ ಕಚೇರಿ ಆವರಣದಲ್ಲಿ ರೋಟರಿ ಸಿಲ್ಕ್ ಸಿಟಿ ಸಹಕಾರದಲ್ಲಿ ಹಮ್ಮಿಕೊಂಡಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಅರುಣ್ ಕುಮಾರ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರೋಟರಿ ಸಿಲ್ಕ್ ಸಿಟಿ ಕಾರ್ಯದರ್ಶಿ ರೋ . ಶಿವರಾಜು, ರೋ ಗೋಪಾಲ್ , ರೋ ಲತಾ ಗೋಪಾಲ್ ರೋ ರಾಘವೇಂದ್ರ ರೋ ರವಿಕುಮಾರ್ ಮುಂತಾದವರು ಭಾಗವಹಿದ್ದರು