ಸಿನಿಮಾ

ಚಂದನವನದ ಹಿರಿಯ ನಟ ಎಸ್. ಶಿವರಾಂ ನಿಧನ.

ಚಂದನವನದ ಹಿರಿಯ ನಟರಾಗಿದ್ದ ಎಸ್. ಶಿವರಾಂ(83) ಅವರು ಶುಕ್ರವಾರ ಮದ್ಯಾಹ್ನ ಪ್ರಶಾಂತ್ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ ಮಾಡುತ್ತಿದ್ದಾಗ ಶಿವರಾಂ ಕುಸಿದುಬಿದ್ದಿದ್ದರು. ಮಿದುಳು ಸಂಕುಚಿತಗೊಂಡಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಶಸ್ತ್ರ ಚಿಕಿತ್ಸೆ ಅಸಾಧ್ಯವೆಂದು ವೈದ್ಯರು ಹೇಳಿದ್ದರು.

1938 ಜನವರಿ 28ರಂದು ಬೆಂಗಳೂರಿನಲ್ಲಿ ಜನಿಸಿದ್ದ ಶಿವಾರಂ ಕನ್ನಡದ ಚಿತ್ರರಂಗದಲ್ಲಿ ಪೋಷಕ, ಹಾಸ್ಯ ಪಾತ್ರದಲ್ಲಿ ಸುಮಾರು 6 ದಶಕಗಳ ಕಾಲ ರಂಜಿಸಿದ್ದರು. ಕಿರುತೆರೆ ಯಲ್ಲೂ ಕಾಣಿಸಿಕೊಂಡು ಜಯಪ್ರಿಯವಾಗಿದ್ದರು. 1965ರಲ್ಲಿ ಬೆರೆತ ಜೀವ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಶಿವಾರಂ ಡಾ.ರಾಜ್ ವಿಷ್ಣುವರ್ಧನ್, ಅಂಬರೀಷ್ ಸೇರಿದಂತೆ ಚಿತ್ರರಂಗದ ಅನೇಕ ಸ್ಟಾರ್ ನಟರ ಜೊತೆ ಬಣ್ಣ ಹಚ್ಚಿದ್ದರು.

ಅಗಲಿದ ಶಿವರಾಂಗೆ ಚಿತ್ರರಂಗದ ಕಲಾವಿದರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!