ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದ್ದು, 73.7% ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು, ಹಾಸನ ಜಿಲ್ಲೆ ಮೊದಲ ಸ್ಥಾನ, ರಾಮನಗರ ಜಿಲ್ಲೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ಈ ಭಾರಿ ಇಬ್ಬರು ವಿದ್ಯಾರ್ಥಿನಿಯರು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. ಆನೇಕಲ್ ತಾ: ಅತ್ತಿಬೆಲೆಯ ಸೆಂಟ್ ಫಿಲೋಮಿನಾ ಶಾಲೆಯ ಡಿ. ಸೃಜನಾ ಮತ್ತು ಕಾರವಾರ ಕುಮುಟಾ ತಾಲ್ಲೂಕಿನ ಕಲಬಾಗದ ಸಿವಿಎಸ್‍ಕೆ ಹೈಸ್ಕೂಲಿನ ವಿದ್ಯಾರ್ಥಿನಿ ನಾಗಂಜಲಿ ಪರಮೇಶ್ವರ್ ನಾಯಕ್ ಈ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಮೊದಲಿಗರಾಗಿದ್ದಾರೆ.
ಈ ಭಾರಿಯ ವಿಶೇಷವೆಂದರೆ ಇತಿಹಾಸದಲ್ಲೇ ಪ್ರಥಮ ಭಾರಿಗೆ ಹಾಸನ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಭಾರಿ ಉಡುಪಿ ಮೊದಲನೇ ಸ್ಥಾನದಲ್ಲಿತ್ತು ಈ ಭಾರಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ರಾಮನಗರ ಜಿಲ್ಲೆಯು ಕೂಡ ಮೊದಲ ಭಾರಿಗೆ 2ನೇ ಸ್ಥಾನವನ್ನು ಪಡೆದುಕೊಂಡಿದೆ.
ರಾಜ್ಯದಲ್ಲಿ ಒಟ್ಟು 11 ವಿದ್ಯಾರ್ಥಿಗಳು 625ಕ್ಕೆ 624 ಅಂಕಗಳನ್ನು ಪಡೆದುಕೊಂಡಿದ್ದಾರೆ ಹಾಸನದ ಪ್ರಗತಿ ಎಂ. ಗೌಡ 624 ಅಂಕಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
“ಓದಿ ಸುಮ್ಮನಾಗಬೇಡಿ ಲೈಕ್ ಮಾಡಿ ಶೇರ್ ಮಾಡಿ ಮಾಹಿತಿ ಎಲ್ಲರಿಗೂ ತಿಳಿಯಲಿ”